Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: អាល់ហាទីត   អាយ៉ាត់:
هُوَ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ؕ— یَعْلَمُ مَا یَلِجُ فِی الْاَرْضِ وَمَا یَخْرُجُ مِنْهَا وَمَا یَنْزِلُ مِنَ السَّمَآءِ وَمَا یَعْرُجُ فِیْهَا ؕ— وَهُوَ مَعَكُمْ اَیْنَ مَا كُنْتُمْ ؕ— وَاللّٰهُ بِمَا تَعْمَلُوْنَ بَصِیْرٌ ۟
ಅವನೇ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಭೂಮಿಯನ್ನು ಪ್ರವೇಶಿಸುವ, ಭೂಮಿಯಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಆಕಾಶಕ್ಕೇರುವ ಎಲ್ಲವನ್ನೂ ಅವನು ತಿಳಿಯುತ್ತಾನೆ. ನೀವೆಲ್ಲೇ ಇದ್ದರೂ ಅವನು ನಿಮ್ಮ ಜೊತೆಯಲ್ಲಿದ್ದಾನೆ.[1] ಅಲ್ಲಾಹು ನೀವು ಮಾಡುವ ಕರ್ಮಗಳನ್ನು ನೋಡುತ್ತಿದ್ದಾನೆ.
[1] ಅಂದರೆ ನಿಮ್ಮ ಎಲ್ಲಾ ಚಲನವಲನಗಳನ್ನು ಅವನು ಗಮನಿಸುತ್ತಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
لَهٗ مُلْكُ السَّمٰوٰتِ وَالْاَرْضِ ؕ— وَاِلَی اللّٰهِ تُرْجَعُ الْاُمُوْرُ ۟
ಭೂಮ್ಯಾಕಾಶಗಳ ಸಾರ್ವಭೌಮತ್ವವು ಅವನಿಗೆ ಸೇರಿದ್ದು. ಎಲ್ಲಾ ವಿಷಯಗಳೂ ಅಲ್ಲಾಹನ ಬಳಿಗೆ ಮರಳುತ್ತವೆ.
តាហ្វសៀរជាភាសា​អារ៉ាប់ជាច្រេីន:
یُوْلِجُ الَّیْلَ فِی النَّهَارِ وَیُوْلِجُ النَّهَارَ فِی الَّیْلِ ؕ— وَهُوَ عَلِیْمٌۢ بِذَاتِ الصُّدُوْرِ ۟
ಅವನು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆ. ಅವನು ಎದೆಗಳ ಒಳಗಿರುವುದನ್ನು ತಿಳಿಯುತ್ತಾನೆ.
តាហ្វសៀរជាភាសា​អារ៉ាប់ជាច្រេីន:
اٰمِنُوْا بِاللّٰهِ وَرَسُوْلِهٖ وَاَنْفِقُوْا مِمَّا جَعَلَكُمْ مُّسْتَخْلَفِیْنَ فِیْهِ ؕ— فَالَّذِیْنَ اٰمَنُوْا مِنْكُمْ وَاَنْفَقُوْا لَهُمْ اَجْرٌ كَبِیْرٌ ۟
ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಯಾವ ಅಸ್ತಿಗೆ ಅವನು ನಿಮ್ಮನ್ನು ವಾರಸುದಾರರಾಗಿ ಮಾಡಿದ್ದಾನೋ ಆ ಧನದಿಂದ (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿರಿ. ನಿಮ್ಮಲ್ಲಿ ಯಾರು ವಿಶ್ವಾಸವಿಡುತ್ತಾರೋ ಮತ್ತು ಖರ್ಚು ಮಾಡುತ್ತಾರೋ ಅವರಿಗೆ ಮಹಾ ಪ್ರತಿಫಲವಿದೆ.
តាហ្វសៀរជាភាសា​អារ៉ាប់ជាច្រេីន:
وَمَا لَكُمْ لَا تُؤْمِنُوْنَ بِاللّٰهِ ۚ— وَالرَّسُوْلُ یَدْعُوْكُمْ لِتُؤْمِنُوْا بِرَبِّكُمْ وَقَدْ اَخَذَ مِیْثَاقَكُمْ اِنْ كُنْتُمْ مُّؤْمِنِیْنَ ۟
ನೀವೇಕೆ ಅಲ್ಲಾಹನಲ್ಲಿ ವಿಶ್ವಾಸವಿಡುವುದಿಲ್ಲ? ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡಬೇಕೆಂದು ಸಂದೇಶವಾಹಕರು ನಿಮ್ಮನ್ನು ಕರೆಯುತ್ತಿದ್ದಾರೆ. ಅಲ್ಲಾಹು ನಿಮ್ಮಿಂದ ಕರಾರು ಪಡೆದಿದ್ದಾನೆ. ನೀವು ವಿಶ್ವಾಸಿಗಳಾಗಿದ್ದರೆ.
តាហ្វសៀរជាភាសា​អារ៉ាប់ជាច្រេីន:
هُوَ الَّذِیْ یُنَزِّلُ عَلٰی عَبْدِهٖۤ اٰیٰتٍۢ بَیِّنٰتٍ لِّیُخْرِجَكُمْ مِّنَ الظُّلُمٰتِ اِلَی النُّوْرِ ؕ— وَاِنَّ اللّٰهَ بِكُمْ لَرَءُوْفٌ رَّحِیْمٌ ۟
ಅವನೇ ನಿಮ್ಮನ್ನು ಕತ್ತಲೆಗಳಿಂದ ಬೆಳಕಿಗೆ ತರುವುದಕ್ಕಾಗಿ ತನ್ನ ದಾಸನ ಮೇಲೆ ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸುವವನು. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮ ಮೇಲೆ ಅಪಾರ ಅನುಕಂಪ ಮತ್ತು ದಯೆ ತೋರುವವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
وَمَا لَكُمْ اَلَّا تُنْفِقُوْا فِیْ سَبِیْلِ اللّٰهِ وَلِلّٰهِ مِیْرَاثُ السَّمٰوٰتِ وَالْاَرْضِ ؕ— لَا یَسْتَوِیْ مِنْكُمْ مَّنْ اَنْفَقَ مِنْ قَبْلِ الْفَتْحِ وَقٰتَلَ ؕ— اُولٰٓىِٕكَ اَعْظَمُ دَرَجَةً مِّنَ الَّذِیْنَ اَنْفَقُوْا مِنْ بَعْدُ وَقَاتَلُوْاؕ— وَكُلًّا وَّعَدَ اللّٰهُ الْحُسْنٰی ؕ— وَاللّٰهُ بِمَا تَعْمَلُوْنَ خَبِیْرٌ ۟۠
ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡದಿರಲು ನಿಮಗೇನಾಗಿದೆ? ವಾಸ್ತವವಾಗಿ ಭೂಮ್ಯಾಕಾಶಗಳ ಉತ್ತರಾಧಿಕಾರದ ಹಕ್ಕು ಅಲ್ಲಾಹನಿಗೆ ಸೇರಿದ್ದು. ನಿಮ್ಮಲ್ಲಿ ಮಕ್ಕಾ ವಿಜಯಕ್ಕೆ ಮೊದಲು (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿದವರು ಮತ್ತು ಯುದ್ಧ ಮಾಡಿದವರು ಇತರರಿಗೆ ಸಮಾನರಾಗುವುದಿಲ್ಲ. ಇವರಿಗೆ ಮಕ್ಕಾ ವಿಜಯದ ನಂತರ ಖರ್ಚು ಮಾಡಿದವರು ಮತ್ತು ಯುದ್ಧ ಮಾಡಿದವರಿಗಿಂತಲೂ ಶ್ರೇಷ್ಠ ಸ್ಥಾನಮಾನಗಳಿವೆ. ಅಲ್ಲಾಹು ಎಲ್ಲರಿಗೂ ಒಳಿತನ್ನು ವಾಗ್ದಾನ ಮಾಡಿದ್ದಾನೆ. ಅಲ್ಲಾಹು ನೀವು ಮಾಡುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
مَنْ ذَا الَّذِیْ یُقْرِضُ اللّٰهَ قَرْضًا حَسَنًا فَیُضٰعِفَهٗ لَهٗ وَلَهٗۤ اَجْرٌ كَرِیْمٌ ۟
ಅಲ್ಲಾಹನಿಗೆ ಉತ್ತಮ ಸಾಲ ಕೊಡುವವನು ಯಾರು? ಹಾಗಾದರೆ ಅಲ್ಲಾಹು ಅವನಿಗೆ ಅದನ್ನು ಹಲವು ಪಟ್ಟು ದ್ವಿಗುಣಗೊಳಿಸುವನು. ಅವನಿಗೆ ಮನದಣಿಯುವ ಪ್ರತಿಫಲವೂ ಇದೆ.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: អាល់ហាទីត
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ